ಕರ್ನಾಟಕ ಬಂದ್ಗೆ ಮೈಸೂರು ಜಿಲ್ಲೆಯಲ್ಲಿ ಸಂಪೂರ್ಣ ಬೆಂಬಲ - ಎಪಿಎಂಸಿ ಕಾಯ್ದೆ ತಿದ್ದುಪಡಿ ಸುದ್ದಿ
🎬 Watch Now: Feature Video
ಕರ್ನಾಟಕ ಬಂದ್ ಗೆ ಮೈಸೂರಿನಲ್ಲಿ ಸಂಪೂರ್ಣ ಬೆಂಬಲ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಭೂ ಸುಧಾರಣಾ ಕಾಯ್ದೆ ಹಾಗೂ ಎಪಿಎಂಸಿ ಕಾಯ್ದೆ ತಿದ್ದುಪಡಿಯನ್ನು ವಾಪಸ್ ಪಡೆಯಬೇಕೆಂದು ಕರೆ ನೀಡಿರುವ ಕರ್ನಾಟಕ ಬಂದ್ ಗೆ ಸಾಂಸ್ಕೃತಿಕ ನಗರಿಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಳಗ್ಗೆಯಿಂದಲೇ ಐಕ್ಯ ಒಕ್ಕೂಟ ಕನ್ನಡ ಪರ ಸಂಘಟನೆಗಳು, ಪ್ರಗತಿಪರ ಸಂಘಟನೆಗಳು, ದಲಿತ ಸಂಘಟನೆಗಳು ಸೇರಿದಂತೆ 40 ಕ್ಕೂ ಹೆಚ್ಚು ಸಂಘಟನೆಗಳು ಬಂದ್ ಗೆ ಬೆಂಬಲ ನೀಡಿವೆ.