ಕರ್ನಾಟಕ ಬಂದ್ಗೆ ವಿಜಯಪುರದಲ್ಲಿ ನೀರಸ ಪ್ರತಿಕ್ರಿಯೆ - ಎಪಿಎಂಸಿ ಕಾಯ್ದೆ ತಿದ್ದುಪಡಿ ಸುದ್ದಿ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-8964742-982-8964742-1601265304106.jpg)
ಎಪಿಎಂಸಿ ಕಾಯ್ದೆ ವಿರೋಧಿಸಿ ರೈತರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ಗೆ ವಿಜಯಪುರದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಳಗ್ಗೆಯಿಂದಲೇ ಕೆಎಸ್ಆರ್ಟಿಸಿ ಬಸ್ ಸಂಚಾರ ಎಂದಿನಂತಿದೆ. ಆಟೋ ಸಂಚಾರ ಎಂದಿನಂತೆ ಇದ್ದು, ಯಾವುದೇ ಅಡ್ಡಿಯಾಗಿಲ್ಲ. ಅಂಗಡಿ ಮುಂಗಟ್ಟುಗಳು ತೆರದಿದ್ದು, ಯಾವುದೇ ಬಂದ್ ವಾತಾವರಣ ನಿರ್ಮಾಣವಾಗಿಲ್ಲ. ಬೆಳಗ್ಗೆ 11 ಗಂಟೆಗೆ ವಿವಿಧ ರೈತರಪರ ಸಂಘಟನೆಗಳು ನಗರದಲ್ಲಿ ಪ್ರತಿಭಟನೆ ನಡೆಸಲಿದ್ದು, ಈ ವೇಳೆ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆಗಳಿವೆ.