ಕೇಂದ್ರದ ಹಿಂದಿ ಹೇರಿಕೆ ನಿಲುವು ಖಂಡಿಸಿ ಕರ್ನಾಟಕ ನವನಿರ್ಮಾಣ ಸೇನೆ ಪ್ರತಿಭಟನೆ - kalaburgi district news
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-4440883-thumbnail-3x2-protest.jpg)
ಕಲಬುರಗಿ : ಕೇಂದ್ರ ಸರ್ಕಾರದಿಂದ ಹಿಂದಿ ದಿವಸ್ ಆಚರಿಸುವುದನ್ನು ವಿರೋಧಿಸಿ ಕರ್ನಾಟಕ ನವನಿರ್ಮಾಣ ಸೇನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಸರ್ದಾರ್ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಕೇಂದ್ರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕನ್ನಡಿಗರ ಮೇಲೆ ಹಿಂದಿ ಹೇರಿಕೆ ಸೂಕ್ತವಲ್ಲ. ಕೂಡಲೇ ಹಿಂದಿ ಹೇರಿಕೆಯನ್ನು ಕೈಬಿಡುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗಳ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.