ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ವಿರೋಧ: ಕರವೇ ಪ್ರತಿಭಟನೆ - ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆ
🎬 Watch Now: Feature Video
ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಕನ್ನಡಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಕಲಬುರಗಿ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಕಣ್ಣಿಗೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು, ರಾಜ್ಯ ಸರ್ಕಾರದ ಕ್ರಮದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಮರಾಠ ಮತಗಳನ್ನು ಓಲೈಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮರಾಠ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆಗೆ ಮುಂದಾಗಿದೆ. ಇದು ಕನ್ನಡಿಗರಿಗೆ ಮಾಡಿದ ದ್ರೋಹ. ತಕ್ಷಣ ಸರ್ಕಾರ ಮರಾಠ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆ ಕೈಬಿಡಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.