ಕೊರೊನಾ ಸಂಕಷ್ಟದಲ್ಲೂ ಕಾಣದಾದ ಸಂಸದ ಅನಂತಕುಮಾರ್ ಹೆಗಡೆ! - ರಾಜ್ಯದಲ್ಲಿ ಅತಿಹೆಚ್ಚು ಬಾರಿ ಸಂಸದರಾಗಿ ಆಯ್ಕೆಯಾದವರ ಪಟ್ಟಿಯಲ್ಲಿ ಉತ್ತರಕನ್ನಡ ಸಂಸದ ಅನಂತ್ ಕುಮಾರ್ ಹೆಗಡೆ
🎬 Watch Now: Feature Video
ಕಾರವಾರ: ರಾಜ್ಯದಲ್ಲಿ ಅತಿಹೆಚ್ಚು ಬಾರಿ ಸಂಸದರಾಗಿ ಆಯ್ಕೆಯಾದವರ ಪಟ್ಟಿಯಲ್ಲಿ ಉತ್ತರಕನ್ನಡ ಸಂಸದ ಅನಂತ್ ಕುಮಾರ್ ಹೆಗಡೆ ಸಹ ಒಬ್ಬರು. ಆದರೆ, ಕ್ಷೇತ್ರದಿಂದ ಆರು ಬಾರಿ ಸಂಸದರಾಗಿ ಆಯ್ಕೆಯಾದ ಅನಂತ್ ಕುಮಾರ್ ಹೆಗಡೆ ವಿರುದ್ದ ಇದೀಗ ಜಿಲ್ಲೆಯ ಜನರು ಆಕ್ರೋಶ ಹೊರಹಾಕುತ್ತಿದ್ದಾರೆ. ಕೊರೊನಾದಂತಹ ಸಂದಿಗ್ಧತೆಯ ಸಂದರ್ಭದಲ್ಲಿ ಜನರ ನೆರವಿಗೆ ದಾವಿಸಬೇಕಿರುವ ಸಂಸದರು ನಾಪತ್ತೆಯಾಗಿದ್ದು, ಅವರನ್ನು ಹುಡುಕಿಕೊಡುವಂತೆಯೂ ಎರಡೆರಡು ದೂರು ಸಹ ದಾಖಲಿಸಲಾಗಿದೆ.