ಪ್ರವಾಹ, ಆರ್ಥಿಕ ಹಿಂಜರಿತದಿಂದ ಕೈಗಾರಿಕಾ ವಲಯಕ್ಕೆ ಹೊಡೆತ.. ಪರಿಹಾರಕ್ಕೆ ಕಾಸಿಯಾ ಒತ್ತಾಯ!
🎬 Watch Now: Feature Video
ಹುಬ್ಬಳ್ಳಿ:ಕರ್ನಾಟಕದಲ್ಲಿ ಹಿಂದೆಂದೂ ಕಂಡರಿಯದ ಮಳೆ ಹಾಗೂ ಪ್ರವಾಹದಿಂದ ಕೃಷಿಯೇತರ ಕ್ಷೇತ್ರಕ್ಕೆ ಮಾತ್ರವಲ್ಲದೆ ಕೈಗಾರಿಕಾ ವಲಯಕ್ಕೆ ಭಾರಿ ಹಾನಿಯಾಗಿದ್ದು, ಕೂಡಲೇ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸೂಕ್ತ ಪರಿಹಾರ ನೀಡಬೇಕು ಎಂದು ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕಾ ಸಂಘದ (ಕಾಸಿಯಾ)ಅಧ್ಯಕ್ಷ ಆರ್.ರಾಜು ಒತ್ತಾಯಿಸಿದರು. ನಗರದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೆರೆ ಹಾವಳಿಯಿಂದ ಅನೇಕ ಕೈಗಾರಿಕೆಗಳು ಸ್ಥಗಿತಗೊಂಡಿವೆ. ಪುನರ್ವಸತಿ ಕಲ್ಪಿಸುವ ಅಗತ್ಯವಿದೆ. ಹೀಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸೂಕ್ತ ಪರಿಹಾರದ ಪ್ಯಾಕೇಜ್ ನೀಡಬೇಕು. ಆರ್ಥಿಕ ಹಿಂಜರಿತದಿಂದ ಸಾಕಷ್ಟು ಕೈಗಾರಿಕೆಗಳು ಶೋಚನೀಯ ಸ್ಥಿತಿಯಲ್ಲಿವೆ. ಜಿಎಸ್ಟಿಯಿಂದ ಸಾಕಷ್ಟು ಅನಾನೂಕುಲವಾಗಿದೆ. ಜಿಎಸ್ಟಿಯನ್ನು ಶೇ.18 ರಿಂದ ಶೇ. 5ಕ್ಕೆ ಇಳಿಕೆ ಮಾಡಬೇಕು ಎಂದು ಒತ್ತಾಯಿಸಿದರು.