ಉದ್ಯೋಗ ಸೃಷ್ಟಿಯಲ್ಲಿ ನಿರ್ಲಕ್ಷ್ಯ: ಸರ್ಕಾರದ ನಡೆಗೆ ಕೆಪಿಸಿಸಿ ವಕ್ತಾರ ಬೇಸರ - ಉದ್ಯೋಗ ಸೃಷ್ಟಿ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-4275079-thumbnail-3x2-chai.jpg)
ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಪ್ರತಿಪಕ್ಷಗಳನ್ನು ಹಣಿಯುವ ಕಾರ್ಯದಲ್ಲಿ ಹೆಚ್ಚು ಗಮನ ಹರಿಸಿವೆಯೇ ಹೊರತು ಉದ್ಯೋಗ ಸೃಷ್ಟಿಸುವ ವಿಚಾರದಲ್ಲಿ ನಿರ್ಲಕ್ಷ್ಯ ತೋರಿಸುತ್ತಿವೆ ಎಂದು ಕೆಪಿಸಿಸಿ ವಕ್ತಾರ ಕೆಂಗಲ್ ಶ್ರೀಪಾದ ರೇಣು ಆರೋಪಿಸಿದ್ದಾರೆ. ಈಟಿವಿ ಭಾರತ ಪ್ರತಿನಿಧಿಯೊಂದಿಗೆ ಮಾತನಾಡಿರುವ ಅವರು, ಸರ್ಕಾರ ಅನಗತ್ಯ ಹುದ್ದೆಗಳನ್ನು ಸೃಷ್ಟಿಸಿ ಆಂತರಿಕವಾಗಿ ಉದ್ಯೋಗ ಸೃಷ್ಟಿಸುತ್ತಿದೆಯೇ ಹೊರತು ಜನರಿಗೆ ಅನುಕೂಲವಾಗುವ ಉದ್ಯೋಗ ಸೃಷ್ಟಿಸುತ್ತಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.