ಜನರನ್ನು ಬೆಚ್ಚಿಬೀಳಿಸಿದ್ದ 16 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ
🎬 Watch Now: Feature Video
ಚಿಕ್ಕಮಗಳೂರಿನಲ್ಲಿ ಬೃಹತ್ ಗಾತ್ರದ ಕಾಳಿಂಗ ಸರ್ಪವನ್ನು ಸೆರೆ ಹಿಡಿಯಲಾಗಿದೆ. ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೆಳಗೂರಿನ ಟೀ ಫ್ಯಾಕ್ಟರಿ ಬಳಿ ಕಳೆದ 15 ದಿನಗಳಿಂದ ಸುಮಾರು 16 ಅಡಿ ಉದ್ದದ ಕಾಳಿಂಗ ಸರ್ಪ ಕಂಡುಬಂದಿತ್ತು. ಟೀ ಎಸ್ಟೇಟ್ನಲ್ಲಿ ಕೆಲಸ ಮಾಡುವ ಕೂಲಿ ಕಾರ್ಮಿಕರಿಗೆ ಹಲವಾರು ಬಾರಿ ಕಾಣಿಸಿಕೊಂಡಿದ್ದು, ಭಯದಿಂದಲೇ ತೋಟದಲ್ಲಿ ಕೆಲಸ ಮಾಡುತ್ತಿದ್ದರು. ಬಳಿಕ ಉರಗ ತಜ್ಞ ಸ್ನೇಕ್ ಆರೀಫ್ಗೆ ಮಾಹಿತಿ ನೀಡಲಾಗಿತ್ತು. ಕೂಡಲೇ ಸ್ಥಳಕ್ಕಾಗಮಿಸಿದ ಆರೀಫ್ 30 ನಿಮಿಷಗಳ ಕಾಲ ಕಾರ್ಯಾಚರಣೆ ನಡೆಸಿ ಕಾಳಿಂಗ ಸರ್ಪ ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಅರಣ್ಯಾಧಿಕಾರಿಗಳ ಸಮ್ಮುಖದಲ್ಲಿ ಚಾರ್ಮಾಡಿ ಘಾಟ್ ಅರಣ್ಯ ಪ್ರದೇಶಕ್ಕೆ ಬಿಡಲಾಗಿದೆ.