ಕ್ಷುಲ್ಲಕ ಕಾರಣಕ್ಕೆ ಹುಬ್ಬಳ್ಳಿಯಲ್ಲಿ ನಾಲ್ವರಿಗೆ ಚಾಕು ಇರಿತ! - ಕ್ಷುಲ್ಲಕ ಕಾರಣಕ್ಕೆ ನಾಲ್ಕು ಜನರ ಮೇಲೆ ಚಾಕು ಇರಿತ ಸುದ್ದಿ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-5849678-thumbnail-3x2-hbl.jpg)
ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ನಾಲ್ಕು ಜನರ ಮೇಲೆ ಚಾಕು ಹಾಗೂ ಕಲ್ಲಿನಿಂದ ಹಲ್ಲೆ ಮಾಡಿರುವ ಘಟನೆ ನಗರದ ಯಲ್ಲಾಪುರ ಓಣಿಯಲ್ಲಿ ನಡೆದಿದೆ. ರವಿ (23), ಸಾಗರ (25), ಸಿದ್ದಪ್ಪ ಕೆಂಗಣ್ಣವರ (45), ಮಂಜುಳಾ ಕೆಂಗಣ್ಣವರ (38) ಎಂಬುವರ ಮೇಲೆ ಹಲ್ಲೆ ನಡೆದಿದೆ. ಹಲ್ಲೆಯಿಂದ ಸಿದ್ದಪ್ಪ ಹಾಗೂ ಮಂಜುಳಾ ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ನಗರದ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಜುನಾಥ ಗೆಜ್ಜಿಹಳ್ಳಿ, ರೇವಂತ, ಬಳಗಾನೂರ, ವಿನೋದ ಯಮನಾಳ ಎಂಬವರೇ ಚಾಕು ಮತ್ತು ಕಲ್ಲುಗಳಿಂದ ಹಲ್ಲೆ ನಡೆಸಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಕುರಿತು ಬೆಂಡಿಗೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.