ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯಲು ಒತ್ತಾಯಿಸಿ ಸಚಿವರಿಗೆ ಮನವಿ ಸಲ್ಲಿಸಿದ ರೈತರು - ಕೊಳ್ಳೇಗಾಲ ರೈತರ ಸಮಸ್ಯೆ
🎬 Watch Now: Feature Video

ಚಾಮರಾಜನಗರ: ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯುವಂತೆ ಒತ್ತಾಯಿಸಿ ರೈತರು ಇಂದು ಜಿಲ್ಲಾ ಪ್ರವಾಸದಲ್ಲಿದ್ದ ಸಚಿವ ಸುರೇಶ್ ಕುಮಾರ್ಗೆ ಕೊಳ್ಳೇಗಾಲದಲ್ಲಿ ಮನವಿ ಪತ್ರ ಸಲ್ಲಿಸಿದರು. ಅಲ್ಲದೆ ಮುಂದಿನ ಸೋಮವಾರವರೆಗೆ ಹನೂರು ಹಾಗೂ ಕೊಳ್ಳೇಗಾಲದಲ್ಲಿ ಖರೀದಿ ಕೇಂದ್ರ ತೆರೆಯದಿದ್ದರೇ ಉಗ್ರ ಹೋರಾಟ ಮಾಡುವುದಾಗಿ ಹೇಳಿದರು. ಈ ವೇಳೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ರೈತರಿಗೆ ಸಚಿವರು ಭರವಸೆ ನೀಡಿದರು.
Last Updated : May 21, 2020, 8:02 PM IST