ಕೋವಿಡ್ ಲಸಿಕೆ ಪಡೆದ ಹನೂರು ಶಾಸಕ - Kovid vaccine get by Hanoor MLA R. Nagendra
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-11204086-thumbnail-3x2-bin.jpg)
ಕೊಳ್ಳೇಗಾಲ: ಕೋವಿಡ್ ಲಸಿಕೆಯನ್ನು ಪಡೆಯುವುದರಿಂದ ಯಾವುದೇ ಅಡ್ಡಪರಿಣಾಮವಿಲ್ಲ ಎಂದು ಹನೂರು ಶಾಸಕ ಆರ್. ನರೇಂದ್ರ ಸಲಹೆ ನೀಡಿದ್ದಾರೆ. ಪಟ್ಟಣದ ಸರ್ಕಾರಿ ಉಪವಿಭಾಗ ಆಸ್ಪತ್ರೆಯಲ್ಲಿ ಸೋಮವಾರ ಕೊರೊನಾ ಲಸಿಕೆಯ ಮೊದಲ ಡೋಸ್ನನ್ನು ಹನೂರು ಶಾಸಕ ಆರ್. ನರೇಂದ್ರ ತಮ್ಮ ಶ್ರೀಮತಿ ಅವರೊಂದಿಗೆ ಆಗಮಿಸಿ ಕೋವ್ಯಾಕ್ಸಿನ್ ಪಡೆದರು. ಬಳಿಕ ಮಾತನಾಡಿದ ಅವರು, ಕೊರೊನಾ ಲಸಿಕೆಯ ಬಗ್ಗೆ ಹರಡುವ ಸುಳ್ಳು ವದಂತಿಗಳಿಗೆ ಜನರು ಕಿವಿಗೊಡಬಾರದು. ಪ್ರತಿಯೊಬ್ಬರು ಆರೋಗ್ಯದ ದೃಷ್ಟಿಯಿಂದ ಲಸಿಕೆ ಹಾಕಿಸಿಕೊಳ್ಳುವುದು ಉತ್ತಮ. ಆರೋಗ್ಯದ ಹಿತದೃಷ್ಟಿಯಿಂದ ಸರ್ಕಾರದ ಸೂಚನೆಗಳನ್ನು ಪಾಲಿಸಬೇಕು. ಕೊರೊನಾ ವಿರುದ್ಧದ ಹೋರಾಟದಲ್ಲಿ ಗೆಲ್ಲಬೇಕಾದರೆ ಸಹಕರಿಸಬೇಕು ಎಂದು ಜನರಿಗೆ ಕರೆ ನೀಡಿದರು.