ರಾಜ್ಯ ಕಾಂಗ್ರೆಸ್ ನಲ್ಲಿ ಗುರು-ಶಿಷ್ಯರೇ ವೈಭವ ಮೆರೆಯುವ ಸಾಧ್ಯತೆ ಹೆಚ್ಚು - ಸಿದ್ದರಾಮಯ್ಯ
🎬 Watch Now: Feature Video
ಕಾಂಗ್ರೆಸ್ ಪ್ರತಿಪಕ್ಷದ ನಾಯಕರ ಆಯ್ಕೆ ಸೇರಿದಂತೆ ವಿವಿಧ ಹುದ್ದೆಗಳ ಆಯ್ಕೆ ಅಂತಿಮಗೊಳಿಸುವ ಸಂಬಂಧ ಸೆ.12 ರಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ರಾಜ್ಯ ವಿಧಾನಸಭೆ ಪ್ರತಿಪಕ್ಷದ ನಾಯಕರಾಗಿ ಸಿದ್ದರಾಮಯ್ಯ ಆಯ್ಕೆ ಬಹುತೇಕ ಖಚಿತವಾಗಿದ್ದು,ಇದಾದರೆ ಇವರ ಶಿಷ್ಯರೆನಿಸಿಕೊಂಡಿರುವ ದಿನೇಶ್ ಗುಂಡೂರಾವ್ ಸ್ಥಾನ ಕೂಡ ನಿರಾತಂಕ ಎಂದು ಹೇಳಲಾಗುತ್ತಿದೆ. ಮುಂಬರುವ ದಿನಗಳಲ್ಲಿ ಗುರು-ಶಿಷ್ಯರ ರಾಜ್ಯಭಾರ ರಾಜ್ಯ ಕಾಂಗ್ರೆಸ್ ನಲ್ಲಿ ನಡೆಯುವುದು ಬಹುತೇಕ ಖಚಿತ ಎಂಬ ಮಾತು ಕೇಳಿಬರುತ್ತಿದೆ.