ಸಚಿವ ಕೆ.ಎಸ್. ಈಶ್ವರಪ್ಪ ಬಹಿರಂಗವಾಗಿ ಕ್ಷಮೆಯಾಚಿಸಲಿ: ಸೀತಾರಾಮ್ - latest news of mysur
🎬 Watch Now: Feature Video
ಬಿಜೆಪಿಯಲ್ಲಿ ಕೆ.ಎಸ್. ಈಶ್ವರಪ್ಪ ಅವರ ವರ್ತನೆ ಯೋಗ್ಯವಲ್ಲವೆಂದು ಭೋವಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಸೀತಾರಾಮ್ ಕಿಡಿಕಾರಿದ್ದಾರೆ. ಜಲದರ್ಶಿನಿ ಸರ್ಕಾರಿ ಅತಿಥಿ ಗೃಹದಲ್ಲಿ ಮಾತನಾಡಿದ ಅವರು, ಸಚಿವ ಕೆ.ಎಸ್ ಈಶ್ವರಪ್ಪ ಅವರು ಮಾಜಿ ಸಿಎಂ ಸಿದ್ದರಾಮಯ್ಯರನ್ನು ವಡ್ಡನೆಂದು ಹೇಳಿ ನಮ್ಮ ಜನಾಂಗವನ್ನು ಅಪಮಾನ ಮಾಡಿದ್ದಾರೆ. ಹಾಗಾಗಿ ಬಹಿರಂಗವಾಗಿ ಕ್ಷಮೆಯಾಚಿಸಬೇಕು. ಇಲ್ಲವಾದಲ್ಲಿ ನಮ್ಮ ಸಮುದಾಯದವರು ದಸರಾ ಬಹಿಷ್ಕಾರದ ಜೊತೆಗೆ ಈಶ್ವರಪ್ಪಗೆ ಘೇರಾವ್ ಹಾಕುತ್ತೇವೆ ಎಂದು ಎಚ್ಚರಿಸಿದರು.
Last Updated : Sep 18, 2019, 9:01 PM IST