ಸಿಡಿ ಬಗ್ಗೆ ಕೇಳ್ಬೇಡಿ, ವಾಕರಿಕೆ ಬರುತ್ತೆ: ಸಚಿವ ಈಶ್ವರಪ್ಪ - ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-11190680-thumbnail-3x2-cdcd.jpg)
ಶಿವಮೊಗ್ಗ: ಸಿಡಿ ಬಗ್ಗೆ ನನಗೆ ಕೇಳ್ಬೇಡಿ, ವಾಕರಿಕೆ ಬರುತ್ತೆ, ಅದು ಅವರು ಅವರಿಗೆ ಬಿಟ್ಟಿದ್ದು, ನನಗೆ ಸಿಡಿ ಬಗ್ಗೆ ಆಸಕ್ತಿ ಇಲ್ಲ ಎಂದು ಸಚಿವ ಕೆಎಸ್ ಈಶ್ವರಪ್ಪ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಮೇಶ ಜಾರಕಿಹೊಳಿ ಸಿಡಿ ಪ್ರಕರಣ ಕುರಿತಾಗಿ ಪ್ರತಿಕ್ರಿಯೆ ನೀಡಿದರು. ಮೂರು ಉಪ ಚುನಾವಣೆಯ ಕುರಿತು ಮಾತನಾಡಿ, ಯಾವುದೇ ಚುನಾವಣೆ ಬಂದರೂ ಬಿಜೆಪಿ ಗೆಲುವು ನಿಶ್ಚಿತ. 17 ಕ್ಷೇತ್ರಗಳ ಉಪ ಚುನಾವಣೆ ಪೈಕಿ 16ರಲ್ಲಿ ಗೆಲುವು ಸಾಧಿಸಿದ್ದೇವೆ. ಹಿಂದೆ ನಡೆದ 28 ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ 25 ಗೆದ್ದಿದ್ದೇವೆ. ಅದರಂತೆ ಈಗ ನಡೆಯುತ್ತಿರುವ ಮಸ್ಕಿ, ಬಸವಕಲ್ಯಾಣ, ಬೆಳಗಾವಿ ಉಪ ಚುನಾವಣೆಯ ಮೂರು ಕ್ಷೇತ್ರಗಳಲ್ಲಿ ಪಕ್ಷದ ಕಾರ್ಯಕರ್ತರ ಸಂಘಟನೆ ಹಾಗೂ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಜನ ಬೆಂಬಲ ನೀಡುತ್ತಾರೆ. ಮೂರೂ ಕ್ಷೇತ್ರಗಳಲ್ಲಿ ದಿಗ್ವಿಜಯ ಸಾಧಿಸುತ್ತೇವೆ ಎಂದರು.