ಕೆಎಸ್ಆರ್ಟಿಸಿ ಬಸ್ಗೆ ಗುದ್ದಿದ ಬ್ಯಾಡಗಿ ಶಾಸಕರ ಪುತ್ರನ ಕಾರು - ಶಾಸಕ ಬಳ್ಳಾರಿ ಪುತ್ರನ ಕಾರಿಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ
🎬 Watch Now: Feature Video
ಹಾವೇರಿ ಜಿಲ್ಲೆ ಬ್ಯಾಡಗಿ ಕ್ಷೇತ್ರದ ಶಾಸಕ ವಿರುಪಾಕ್ಷಪ್ಪ ಬಳ್ಳಾರಿ ಪುತ್ರ ಯುವರಾಜ ಬಳ್ಳಾರಿ ಚಲಾಯಿಸುತ್ತಿದ್ದ ಕಾರು ವಾಯುವ್ಯ ಸಾರಿಗೆ ಸಂಸ್ಥೆಯ ಬಸ್ಸಿಗೆ ಡಿಕ್ಕಿ ಹೊಡೆದಿದೆ. ಶಿಗ್ಗಾಂವಿ ಪಟ್ಟಣದ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಈ ಅವಘಡ ಸಂಭವಿಸಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾರಿಗೂ ಯಾವುದೇ ರೀತಿಯ ಗಾಯಗಳಾಗಿಲ್ಲ. ಆದ್ರೆ ಕಾರಿನ ಮುಂಭಾಗ ಹಾಗೂ ಬಸ್ಸಿನ ಹಿಂಭಾಗ ಜಖಂಗೊಂಡಿದೆ. ಶಾಸಕ ಬಳ್ಳಾರಿ ಪುತ್ರ ಯುವರಾಜ, ಹಾವೇರಿ ಕಡೆಯಿಂದ ಹುಬ್ಬಳ್ಳಿ ಕಡೆಗೆ ಹೊರಟಿದ್ದಾಗ ಈ ಘಟನೆ ನಡೆದಿದೆ. ಈ ಸಂಬಂಧ ಶಿಗ್ಗಾಂವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Last Updated : Dec 4, 2020, 6:08 AM IST