ಮ್ಯಾಜಿಕ್ ಮೂಲಕ ಕೊರೊನಾ ಬಗ್ಗೆ ಜಾಗೃತಿ ಮೂಡಿಸಿದ ಜಾದೂಗಾರ ಕುದ್ರೋಳಿ ಗಣೇಶ್ - covid 19
🎬 Watch Now: Feature Video
ಕೊರೊನಾ ವೈರಸ್ ಜನರ ಆತಂಕಕ್ಕೆ ಕಾರಣವಾಗಿದೆ. ಕೊರೊನಾ ವೈರಸ್ ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಬೇರೆ ಬೇರೆ ರೀತಿಯಲ್ಲಿ ಜಾಗೃತಿ ಕಾರ್ಯಕ್ರಮ ನಡೆಯುತ್ತಿದೆ. ಖ್ಯಾತ ಜಾದೂಗಾರ ಮಂಗಳೂರಿನ ಕುದ್ರೋಳಿ ಗಣೇಶ್ ಕೊರೊನಾ ವೈರಸ್ ಹರಡದಂತೆ ತಡೆಯುವ ಬಗ್ಗೆ ಜಾದೂ ಮೂಲಕ ಜಾಗೃತಿ ಮೂಡಿಸಿದ ವಿಡಿಯೋ ವೈರಲ್ ಆಗಿದೆ. ಕೊರೊನಾ ಎಂದು ಬರೆದಿರುವ ಕರವಸ್ತ್ರವನ್ನು ಕೈಯೊಳಗೆ ಇರಿಸಿ ಅದಕ್ಕೆ ಸ್ಯಾನಿಟೈಸರ್ ಹಾಕಿ ಕೈ ತೊಳೆಯುತ್ತಾ ಮಾಯಗೊಳಿಸುವ ಮೂಲಕ ಕೊರೊನಾ ಬಗ್ಗೆ ಜಾಗೃತಿ ಮೂಡಿಸಿದ್ದಾರೆ. ಈ ಸಂದರ್ಭದಲ್ಲಿ ಕೊರೊನಾ ಬಗ್ಗೆ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ, ಕೊರೊನಾ ಹರಡದಂತೆ ತೆಗೆದುಕೊಳ್ಳಬೇಕಾದ ಮುಂಜಾಗ್ರತೆ ಬಗ್ಗೆ ಜಾಗೃತಿ ಮೂಡಿಸಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.