ಕುಮಾರಸ್ವಾಮಿ ಮತ್ತೊಮ್ಮೆ ಸಿಎಂ ಆಗಲಿದ್ದಾರೆ: ನಂಜಾವಧೂತ ಸ್ವಾಮೀಜಿ ಭವಿಷ್ಯ - ಕುಮಾರಸ್ವಾಮಿ ಮತ್ತೊಮ್ಮೆ ಸಿಎಂ ಆಗಲಿದ್ದಾರೆ
🎬 Watch Now: Feature Video
ರಾಮನಗರ: ಮಾಜಿ ಸಿಎಂ ಕುಮಾರಸ್ವಾಮಿಯವರು ಅಧಿಕಾರದಲ್ಲಿದ್ದಾಗ ಬಹಳ ಒಳ್ಳೆಯ ಕೆಲಸ ಮಾಡಿದ್ದಾರೆ. ಆದರೆ ಅವರು ಮಾಡಿದ ಕೆಲಸ ಕಾರ್ಯಗಳು ಸರಿಯಾಗಿ ಪ್ರಚಾರವಾಗಲಿಲ್ಲ. ಮತ್ತೊಮ್ಮೆ ಕುಮಾರಸ್ವಾಮಿಯವರು ಸಿಎಂ ಆಗೋ ದಿನ ಬರುತ್ತೆ ಎಂದು ನಂಜಾವಧೂತ ಸ್ವಾಮೀಜಿ ಭವಿಷ್ಯ ನುಡಿದರು. ಚನ್ನಪಟ್ಟಣದಲ್ಲಿನ ಬಮೂಲ್ ಉತ್ಸವದಲ್ಲಿ ಮಾತನಾಡಿದ ಅವರು, ಜನಸಾಮಾನ್ಯರ ಕಷ್ಟಕ್ಕೆ ಸ್ಪಂದಿಸುವ ಮುಖ್ಯಮಂತ್ರಿ ಇದ್ರೆ ಅದು ಕುಮಾರಸ್ವಾಮಿಯವರು ಮಾತ್ರ. ಅವರ ಕಾರ್ಯಕ್ರಮಗಳಿಗೆ ಪ್ರಚಾರ ಸಿಕ್ಕಿಲ್ಲ. ಅವರಿಗೆ ಮತ್ತೆ ಸಿಎಂ ಆಗುವ ಯೋಗ ಇದೆ ಎಂದು ಭವಿಷ್ಯ ನುಡಿದರು. ರಾಜ್ಯದಲ್ಲಿ ಯಡಿಯೂರಪ್ಪನವರು ಒಳ್ಳೆಯ ಕೆಲಸಗಳನ್ನು ಮಾಡಬೇಕಿದೆ. ಅವರ ಸರ್ಕಾರಕ್ಕೆ ಕುಮಾರಸ್ವಾಮಿಯವರು ಯಾವುದೇ ತೊಂದರೆ ಮಾಡೋದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.