ತುಮಕೂರು ಜಿಲ್ಲೆಗೆ ಆಗಮಿಸಿದ ಕುರುಬ ಸಮುದಾಯದ ಪಾದಯಾತ್ರೆ - ತುಮಕೂರು ಸುದ್ದಿ
🎬 Watch Now: Feature Video
ತುಮಕೂರು: ಮೀಸಲಾತಿಗೆ ಆಗ್ರಹಿಸಿ ಕುರುಬ ಸಮುದಾಯದಿಂದ ಆರಂಭವಾಗಿರುವ ಪಾದಯಾತ್ರೆ ಇಂದು ತುಮಕೂರು ಜಿಲ್ಲೆ ಶಿರಾ ತಾಲೂಕಿನ ಜಾವಗೊಂಡನಹಳ್ಳಿಗೆ ಅಗಮಿಸಿತು. ಕಾಗಿನೆಲೆಯಿಂದ ಆರಂಭವಾಗಿರುವ ಪಾದಯಾತ್ರೆ ತುಮಕೂರು ಮೂಲಕ ಬೆಂಗಳೂರು ತಲುಪಲಿದೆ. ಜಿಲ್ಲೆಯಲ್ಲಿ ಐದು ದಿನಗಳ ಕಾಲ ಸಂಚರಿಸಲಿದೆ. ಪಾದಯಾತ್ರೆಯಲ್ಲಿ ಕಾಗಿನೆಲೆ ಗುರುಪೀಠದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ಸೇರಿದಂತೆ ವಿವಿಧ ಮಠಾಧೀಶರು ಪಾಲ್ಗೊಂಡಿದ್ದಾರೆ. ನೂರಾರು ಮಂದಿ ಈ ಪಾದಯಾತ್ರೆಯಲ್ಲಿ ಭಾಗವಹಿಸಿದ್ದು ಜಿಲ್ಲೆಗೆ ಆಗಮಿಸುತ್ತಿದ್ದಂತೆ ಮಾಜಿ ಶಾಸಕ ಸುರೇಶ್ ಬಾಬು ಕೂಡ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ.