ರಾಕೇಶ್ ಟಿಕಾಯತ್ ಮೇಲೆ ಹಲ್ಲೆ ಯತ್ನಕ್ಕೆ ಕುರುಬೂರು ಶಾಂತಕುಮಾರ್ ಖಂಡನೆ - ಕುರುಬೂರು ಶಾಂತಕುಮಾರ್

🎬 Watch Now: Feature Video

thumbnail

By

Published : Apr 3, 2021, 12:38 AM IST

ಮೈಸೂರು: ಸಂಯುಕ್ತ ಕಿಸಾನ್ ಮೋರ್ಚಾದ ಮುಖಂಡ ರಾಕೇಶ್ ಟಿಕಾಯತ್​ ಮೇಲೆ ಹಲ್ಲೆಗೆ ಯತ್ನಿಸಿರುವುದನ್ನು ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಖಂಡಿಸಿದ್ದಾರೆ. ಈ ಕುರಿತು ಮಾಧ್ಯಮ ಹೇಳಿಕೆ ವಿಡಿಯೋ ಬಿಡುಗಡೆ ಮಾಡಿರುವ ಅವರು, ರಾಜಸ್ಥಾನದ ಅಲ್ವರ್ ಜಿಲ್ಲೆಗೆ ಕಿಸಾನ್ ಮಹಾಪಂಚಾಯತ್​​ನಲ್ಲಿ ಭಾಗವಹಿಸಲು ತೆರಳುತ್ತಿದ್ದ ಟಿಕಾಯತ್ ಕಾರಿನ ಮೇಲೆ ದಾಳಿ ನಡೆಸಿ, ಹಲ್ಲೆಗೆ ಯತ್ನಿಸಿರುವ ಬಿಜೆಪಿ ಬೆಂಬಲಿಗರ ಗೂಂಡಾ ವರ್ತನೆ ಖಂಡನೀಯ. ರೈತ ಚಳವಳಿಯನ್ನು ಹತ್ತಿಕ್ಕಲು ಪ್ರಜಾಪ್ರಭುತ್ವ ಧಮನಕಾರಿ ನೀತಿ ಅನುಸರಿಸುತ್ತಿರುವುದು ರಾಷ್ಟ್ರೀಯ ಪಕ್ಷದ ಸರ್ಕಾರಕ್ಕೆ ಶೋಭೆ ತರುವುದಿಲ್ಲ. ಈ ರೀತಿಯ ಗೂಂಡಾವರ್ತನೆಗೆ ದೇಶದ ರೈತರು ಮುಂದಿನ ದಿನಗಳಲ್ಲಿ ತಕ್ಕ ಉತ್ತರ ನೀಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.