ಲ್ಯಾಬ್ ಟೆಕ್ನಿಷಿಯನ್ ತಗುಲಿದ ಸೋಂಕು: ಕಾಫಿನಾಡಿನ ಜನರಲ್ಲಿ ಆತಂಕ - Lab Technician
🎬 Watch Now: Feature Video
ಚಿಕ್ಕಮಗಳೂರು ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಸೋಂಕಿತರ ಜೊತೆ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕ ಹೊಂದಿದ್ದ ಜನರನ್ನು ನಗರದ ಮಧುವನ ಲೇಔಟ್ನಲ್ಲಿರುವ ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯ ಕಟ್ಟಡದಲ್ಲಿ ಕ್ವಾರಂಟೈನ್ ಮಾಡಲಾಗುತ್ತಿತ್ತು. ಇದೇ ಕಟ್ಟಡದಲ್ಲಿ ಸಾರ್ವಜನಿಕರ ಗಂಟಲು ದ್ರವವನ್ನೂ ಪರೀಕ್ಷಿಸಲಾಗುತ್ತಿತ್ತು. ಆದರೆ ಇಂದು ಈ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಲ್ಯಾಬ್ ಟೆಕ್ನಿಷಿಯನ್‌ಗೆ ಸೋಂಕು ತಗುಲಿರುವುದರಿಂದ ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ. ಹೀಗಾಗಿ ಈ ಕಟ್ಟಡದಲ್ಲಿ ತಾತ್ಕಾಲಿಕವಾಗಿ ಗಂಟಲು ದ್ರವ ಪರೀಕ್ಷೆ ನಿಲ್ಲಿಸಲಾಗಿದೆ. ಈ ಕುರಿತು ಈಟಿವಿ ಭಾರತ ಪ್ರತಿನಿಧಿ ಪ್ರತ್ಯಕ್ಷ ವರದಿ ನೀಡಿದ್ದಾರೆ.