ಲಕ್ಷಾಂತರ ರೂ. ವೆಚ್ಚದಲ್ಲಿ ಕೆರೆ ಅಭಿವೃದ್ಧಿಪಡಿಸಿದ್ರೂ ಉಪಯೋಗವಿಲ್ಲ.. - ಕೊಪ್ಪಳ ಲೇಟೆಸ್ಟ್ ನ್ಯೂಸ್
🎬 Watch Now: Feature Video
ಕೊಪ್ಪಳ: ಜಿಲ್ಲೆಯ ನೂತನ ಕುಕನೂರು ತಾಲೂಕಿನ ಬಿನ್ನಾಳ ಗ್ರಾಮದ ಹೊರವಲಯದಲ್ಲಿ ಲಕ್ಷಾಂತರ ರೂ. ಖರ್ಚು ಮಾಡಿ ಕೆರೆ ಅಭಿವೃದ್ಧಿ ಪಡಿಸಲಾಗಿದೆ. ಆದರೆ, ಕಳಪೆ ಕಾಮಗಾರಿಯಿಂದಾಗಿ ಕೆರೆಯ ಒಳಭಾಗದಲ್ಲಿ ಕಲ್ಲುಗಳು ಕಿತ್ತು ಹೋಗಿವೆ. ಮಳೆಗಾಲದಲ್ಲಿ ಒಂದಿಷ್ಟು ಜಮೀನುಗಳಿಂದ ಕೆರೆಗೆ ನೀರು ಹರಿದು ಬರುತ್ತಿದೆ. ಈ ಕೆರೆಗೆ ಬರಬೇಕೆಂದ್ರೆ ಸುಮಾರು ಮೂರ್ನಾಲ್ಕು ಕಿ.ಮೀ ಸುತ್ತಿಕೊಂಡು ಬರಬೇಕು. ಗ್ರಾಮದಿಂದ ಕೆರೆಗೆ ಹತ್ತಿರದ ಸಂಪರ್ಕ ಕಲ್ಪಿಸುವ ರಸ್ತೆಗಳು ಹದಗೆಟ್ಟಿವೆ. ಈ ಕೆರೆ ಬಿನ್ನಾಳ ಗ್ರಾಮಸ್ಥರಿಗೆ ಇದ್ದೂ ಇಲ್ಲದಂತಾಗಿದೆ..