ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸಡಗರದ ಲಕ್ಷದೀಪೋತ್ಸವ.... ಹರಿದು ಬಂದ ಭಕ್ತ ಸಾಗರ - ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವರ ಲಕ್ಷದೀಪೋತ್ಸವ ಸುದ್ದಿ
🎬 Watch Now: Feature Video
ಸುಬ್ರಹ್ಮಣ್ಯ: ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವರ ಲಕ್ಷದೀಪೋತ್ಸವವು ವಿಜೃಂಭಣೆಯಿಂದ ಮಂಗಳವಾರ ರಾತ್ರಿ ನೆರವೇರಿತು. ಚಂದ್ರಮಂಡಲ ರಥದಲ್ಲಿ ಸುಬ್ರಹ್ಮಣ್ಯ ದೇವರ ಉತ್ಸವ ನಡೆಯಿತು. ಆಕರ್ಷಕ ವಿದ್ಯುತ್ ದೀಪಗಳ ಅಲಂಕಾರದಿಂದ ದೇವಸ್ಥಾನ ವಿಶೇಷವಾಗಿ ಕಂಗೊಳಿಸುತ್ತಿತ್ತು. ರಥಬೀದಿಯಿಂದ ಕಾಶಿಕಟ್ಟೆವರೆಗೆ ಬೆಳಗಿದ ಹಣತೆಗಳು ಲಕ್ಷದೀಪೋತ್ಸವಕ್ಕೆ ಮೆರುಗು ನೀಡಿದವು. ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಚಂದ್ರಮಂಡಲ ರಥದ ಉತ್ಸವ, ದೀಪೋತ್ಸವ ವೀಕ್ಷಿಸಿ ದೇವರ ದರ್ಶನ ಪಡೆದರು. ಸಂಜೆ ಆದಿ ಸುಬ್ರಹ್ಮಣ್ಯದಲ್ಲಿ ರಂಗಪೂಜೆ ನಡೆದು, ಆ ಬಳಿಕ ಪ್ರಧಾನ ದೇವಾಲಯದಲ್ಲಿ ನವಧಾನ್ಯಗಳನ್ನು ಬಿತ್ತುವ ಅಂಕುರಾರ್ಪಣೆ ನೆರವೇರಿತು. ಮಹಾಪೂಜೆ ಬಳಿಕ ಶ್ರೀ ದೇವರ ಹೊರಾಂಗಣ ಉತ್ಸವ ಆರಂಭವಾಯಿತು. ಕಾಶಿಕಟ್ಟೆ ಮಹಾಗಣಪತಿ ಸನ್ನಿಧಾನದಲ್ಲಿ ಶ್ರೀದೇವರ ಗುರ್ಜಿ ಪೂಜೋತ್ಸವ ನೆರವೇರಿದ್ದು, ದ್ಯೆವನರ್ತನ ಸೇರಿದಂತೆ ಹಲವು ವಿಶೇಷ ಪೂಜಾವಿಧಿ ವಿಧಾನಗಳು ನಡೆಯಿತು. ಸಹಸ್ರಾರು ಸಂಖ್ಯೆಯಲ್ಲಿ ಊರ ಹಾಗೂ ಪರಊರ ಭಕ್ತರು ನೆರೆದಿದ್ದರು.
Last Updated : Nov 27, 2019, 9:57 AM IST