ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ವಾಪಸ್ ಪಡೆಯುವಂತೆ ರಾಜ್ಯ ಸರ್ಕಾರಕ್ಕೆ ರೈತರ ಆಗ್ರಹ - ರಾಜ್ಯ ರೈತ ಸಂಘ
🎬 Watch Now: Feature Video
ಶಿವಮೊಗ್ಗ: ಭೂ ಸುಧಾರಣಾ ತಿದ್ದುಪಡಿ ಕಾಯ್ದೆಯನ್ನು ಕೂಡಲೇ ರಾಜ್ಯ ಸರ್ಕಾರ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ರೈತರ ಪರವಾದ ಸರ್ಕಾರ ಎಂದು ಹೇಳಿ ರೈತರ ಬೆನ್ನಿಗೆ ಚೂರಿ ಹಾಕುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ. ಹಾಗಾಗಿ ತಕ್ಷಣವೇ ಈ ಕಾಯ್ದೆಯನ್ನು ವಾಪಸ್ ಪಡೆಯಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.