ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಕೊನೆಯ ದಿನದ ಲಾಕ್ಡೌನ್
🎬 Watch Now: Feature Video
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ಹಿನ್ನೆಲೆಯಲ್ಲಿ ಕಳೆದ ಗುರುವಾರದಿಂದ ಒಂದು ವಾರ ಲಾಕ್ಡೌನ್ ಘೋಷಿಸಲಾಗಿತ್ತು. ಇಂದಿನವರೆಗೆ ಇದ್ದ ಲಾಕ್ಡೌನ್ ಅನ್ನು ಮುಖ್ಯಮಂತ್ರಿಗಳ ನಿರ್ದೇಶನದ ಹಿನ್ನೆಲೆಯಲ್ಲಿ ಮುಂದುವರಿಸದಿರಲು ಜಿಲ್ಲಾಡಳಿತ ನಿರ್ಧರಿಸಿದೆ. ಈ ಕಾರಣದಿಂದ ಎರಡನೇ ಹಂತದ ಲಾಕ್ಡೌನ್ ಇಂದಿಗೆ ಕೊನೆಯಾಗಲಿದೆ. ಜಿಲ್ಲೆಯಲ್ಲಿ ಈವರೆಗೆ 3,834 ಮಂದಿಗೆ ಕೊರೊನಾ ದೃಢಪಟ್ಟಿದೆ. ನಿನ್ನೆ 127 ಮಂದಿ ಗುಣಮುಖರಾಗಿದ್ದು, ಈವರೆಗೆ 1675 ಮಂದಿ ಗುಣಮುಖರಾಗಿದ್ದಾರೆ. 2070 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.