11 ಗಂಟೆವರೆಗೂ ಚಿರು ಪಾರ್ಥಿವ ಶರೀರದ ಅಂತಿಮ ದರ್ಶನ: ಪ್ರತ್ಯಕ್ಷ ವರದಿ - ಚಿರು ಪಾರ್ಥಿವ ಶರೀರದ ಅಂತಿಮ ದರ್ಶನ
🎬 Watch Now: Feature Video
ನಟ ಚಿರಂಜೀವಿ ಸರ್ಜಾ ಅವರ ಪಾರ್ಥಿವ ಶರೀರವನ್ನು ಬಸವನ ಗುಡಿಯ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಇಟ್ಟಿದ್ದು, ಅಭಿಮಾನಿಗಳು ಹಾಗೂ ಚಿತ್ರರಂಗದ ಗಣ್ಯರು ಹಾಗೂ ರಾಜಕೀಯ ನಾಯಕರು ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ಹೇಳ್ತಿದ್ದಾರೆ. ಇನ್ನು ಚಿರಂಜೀವಿ ಸರ್ಜಾ ಅವರ ಅಂತ್ಯಕ್ರಿಯೆ ಕನಕಪುರ ರಸ್ತೆಯ ನೆಲಗುಳಿ ಫಾರ್ಮ್ ಹೌಸ್ನಲ್ಲಿ ಮಾಡಲು ಕುಟುಂಬದವರು ನಿರ್ಧರಿಸಿದ್ದು 11 ಗಂಟೆವರೆಗೂ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಬಳಿಕ ಮೃತ ದೇಹವನ್ನು ಧ್ರುವ ಸರ್ಜಾ ಫಾರ್ಮ್ ಹೌಸ್ಗೆ ಕೊಂಡೊಯ್ಯಲ್ಲಿದ್ದಾರೆ. ಆ ಕುರಿತು ನಮ್ಮ ಪ್ರತಿನಿಧಿ ಪ್ರತ್ಯಕ್ಷ ವರದಿ ನೀಡಿದ್ದಾರೆ.