ವೃದ್ಧೆ ಮೇಲೆ ಚಿರತೆ ಭೀಕರ ದಾಳಿ: ಬೇರ್ಪಟ್ಟ ರುಂಡ-ಮುಂಡ! - ಬೆಂಗಳೂರು ಗ್ರಾಮಾಂತರ ತಾಲೂಕಿನ ತಾವರೇಕೆರೆಯ ಬಳಿ ಚಿರತೆ ದಾಳಿ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-7218264-thumbnail-3x2-smk.jpg)
ರಾಮನಗರ: ಚಿರತೆ ದಾಳಿಯಿಂದ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಕೊಟ್ಟಿಗಾನಹಳ್ಳಿಯಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ ತಾಲೂಕಿನ ತಾವರೇಕೆರೆ ಪೊಲೀಸ್ ಠಾಣೆ ವ್ಯಾಪ್ತಿಯ ಕೊಟ್ಟಿಗಾನಹಳ್ಳಿ ಬಳಿ ಬೆಳಗಿನ ಜಾವ ಬಹಿರ್ದೆಸೆಗೆಂದು ಗಂಗಮ್ಮ(68) ಎಂಬ ವೃದ್ಧೆ ಹೋಗಿದ್ದರು. ಈ ವೇಳೆ ಚಿರತೆ ದಾಳಿಗೆ ಬಲಿಯಾಗಿದ್ದು, ಮೃತದೇಹವನ್ನು ನೆಲಮಂಗಲ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ದೌಡಾಯಿಸಿ ಪರಿಶೀಲನೆ ನಡೆಸಿದ್ದು, ಚಿರತೆ ಸೆರೆಗಾಗಿ ಕ್ರಮಕ್ಕೆ ಅರಣ್ಯ ಇಲಾಖೆ ಮುಂದಾಗಿದೆ. ಇನ್ನು ತಾವರೆಕೆರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
TAGGED:
leopard attack in ramanagara