ಪಾಳು ಬಾವಿಗೆ ಬಿದ್ದ ಚಿರತೆ ರಕ್ಷಣೆ: ವಿಡಿಯೋ - Forest department Officers
🎬 Watch Now: Feature Video

ಮೈಸೂರು: ಮೂರು ದಿನಗಳ ಕಾರ್ಯಾಚರಣೆ ಬಳಿಕ ಪಾಳುಬಾವಿಗೆ ಬಿದ್ದಿದ್ದ ಚಿರತೆಯನ್ನು ಅರಣ್ಯ ಅಧಿಕಾರಿಗಳು ರಕ್ಷಿಸಿದ್ದಾರೆ. ನಾಗರಹೊಳೆ ರಾಷ್ಟ್ರೀಯ ಉದ್ಯಾನದ ವ್ಯಾಪ್ತಿಯ ಕಾರಾಪುರದ ಬಳಿ ಮನೆಯೊಂದರ ಹಿಂಭಾಗದಲ್ಲಿದ್ದ ಪಾಳು ಬಾವಿಗೆ ಸುಮಾರು 2ವರ್ಷದ ಚಿರತೆಯೊಂದು ಬಾವಿಗೆ ಬಿದ್ದಿತ್ತು. ಬಳಿಕ ಅರಣ್ಯಾಧಿಕಾರಿಗಳು ರಕ್ಷಣೆ ಮಾಡಿದ್ದು, ಚಿಕಿತ್ಸೆ ನೀಡಿ ಇಂದು ನಾಗರಹೊಳೆ ರಾಷ್ಟ್ರೀಯ ಉದ್ಯಾನಕ್ಕೆ ಬಿಟ್ಟಿದ್ದಾರೆ.