ಮೈಸೂರು ನಗರವನ್ನು ಪ್ಲಾಸ್ಟಿಕ್ ಮುಕ್ತ ಮಾಡೋಣ:ಸೃಜನ್ ಲೋಕೇಶ್ - Mysore city clean
🎬 Watch Now: Feature Video
ಸ್ವಚ್ಚ ನಗರಿ ಮೈಸೂರನ್ನು ನಾವೆಲ್ಲಾ ಸೇರಿ ಪ್ಲಾಸ್ಟಿಕ್ ಮುಕ್ತ ನಗರವನ್ನಾಗಿ ಮಾಡೋಣ ಎಂದು ನಟ ಸೃಜನ್ ಲೋಕೇಶ್ ಹೇಳಿಕೆ ನೀಡಿದ್ದಾರೆ. ಇಂದು ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಈ ವರ್ಷದ ಶೈಕ್ಷಣಿಕ ಸಾಲಿನ ವಿಶ್ವವಿದ್ಯಾನಿಲಯದ ಅಂತರ ಕಾಲೇಜು ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಸೆನೆಟ್ ಭವನದಲ್ಲಿ ಉದ್ಘಾಟನೆ ಮಾಡಿ ಮಾತನಾಡಿದ ಚಲನಚಿತ್ರ ನಟ ಹಾಗೂ ಕಿರುತೆರೆಯ ಪ್ರಸಿದ್ಧ ಕಾರ್ಯಕ್ರಮದ ನಿರೂಪಕರಾದ ಸೃಜನ್ ಲೋಕೇಶ್ ಕಳೆದ ಬಾರಿ ಸ್ವಚ್ಚ ನಗರಿ ಪಟ್ಟಣದಲ್ಲಿ ಮೂರನೇ ಸ್ಥಾನಕ್ಕೆ ಹೋಗಲು ನಾವೇ ಕಾರಣ ಇನ್ನು ಮುಂದೆಯಾದರು ಸಾಂಸ್ಕೃತಿಕ ನಗರಿಯನ್ನು ಪ್ಲಾಸ್ಟಿಕ್ ಮುಕ್ತ ನಗರವನ್ನಾಗಿ ಮಾಡೋಣ ಇದಕ್ಕೆ ನಾವೆಲ್ಲರೂ ಒಟ್ಟಾಗಿ ಕೈ ಜೋಡಿಸೋಣ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಈ ಕಾರ್ಯಕ್ರಮವನ್ನು ಖ್ಯಾತ ನಟಿ ಸೋನು ಗೌಡ ಜೊತೆ ಉದ್ಘಾಟನೆ ಮಾಡಿದರು. ಈ ಕಾರ್ಯಕ್ರಮ ಮೂರು ದಿನಗಳ ಕಾಲ ನಡೆಯಲಿದೆ.