ಬಾಲಕಿ ಮೇಲೆ ಅತ್ಯಾಚಾರ ಖಂಡಿಸಿ ಪ್ರತಿಭಟನೆ - ಡಿಎಸ್ಎಸ್ ಪ್ರತಿಭಟನೆ
🎬 Watch Now: Feature Video

ರಾಜ್ಯ ಹಾಗೂ ದೇಶವ್ಯಾಪಿ ಹೆಚ್ಚುತ್ತಿರುವ ಅತ್ಯಾಚಾರ ಮತ್ತು ದೌರ್ಜನ್ಯ ಪ್ರಕರಣ ವಿರೋಧಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ರಾಯಚೂರು ಜಿಲ್ಲೆಯ ಲಿಂಗಸೂಗೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ತಾಲೂಕಿನ ವಿದ್ಯಾರ್ಥಿನಿ ಸಾವಿನ ತನಿಖೆ ನಡೆಸಿ ನ್ಯಾಯ ಒದಗಿಸಬೇಕು. ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದು, ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಆರೋಪಿಗಳಿಗೆ ಕಠಿಣ ಶಿಕ್ಷೆ, ಮೃತ ವಿದ್ಯಾರ್ಥಿನಿ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಲಿಂಗಸೂಗೂರು ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಿದರು.