ಮಂಗಳೂರು ಏರ್ಪೋರ್ಟ್ನಲ್ಲಿ ಬಾಂಬ್ ನಿಷ್ಕ್ರಿಯಗೊಳಿಸಿದ್ರೂ ಜನರಲ್ಲಿ ದೂರವಾಗಿಲ್ಲ ಆತಂಕ - A team of bomb detection and disposal squad along with the local police/'
🎬 Watch Now: Feature Video
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಪತ್ತೆಯಾದ ಬಳಿಕ ಉಂಟಾದ ಆತಂಕದ ವಾತಾವರಣ ಇನ್ನೂ ದೂರವಾಗಿಲ್ಲ. ಸೋಮವಾರ ಬೆಳಗ್ಗೆ ಪತ್ತೆಯಾಗಿದ್ದ ಬಾಂಬ್ ಅನ್ನು ಸಂಜೆ ವೇಳೆಗೆ ನಿಷ್ಕ್ರಿಯಗೊಳಿಸಲಾಗಿತ್ತು. ಆದರೂ ಘಟನೆಯ ಆತಂಕ ಜನರಲ್ಲಿ ಕಡಿಮೆಯಾಗಿಲ್ಲ. ವಿಮಾನ ನಿಲ್ದಾಣದಲ್ಲಿ ಬರುವ ವಾಹನಗಳ ಮತ್ತು ಪ್ರಯಾಣಿಕರ ತಪಾಸಣೆ ಮತ್ತಷ್ಟು ಬಿಗಿಗೊಳಿಸಲಾಗಿದೆ. ಅಲ್ಲದೆ, ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಇಂದು ಬೆಳಗಿನಿಂದಲೇ ಎನ್ಎಸ್ಜಿ ಬ್ಲ್ಯಾಕ್ ಕಮಾಂಡೋ ಮತ್ತು ಎಟಿಎಸ್ ತಂಡ ಪರಿಶೀಲನೆ ನಡೆಸಿತು. ಬಾಂಬು ಇರಿಸಿದ ವ್ಯಕ್ತಿ ಬಂದ ಆಟೋ ಮತ್ತು ಅದರ ಚಾಲಕನನ್ನು ವಿಚಾರಣೆ ನಡೆಸಲಾಗುತ್ತಿದೆ. ಆರೋಪಿಗಳನ್ನು ಶೀಘ್ರ ಬಂಧಿಸುತ್ತೇವೆ ಎಂದು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ. ಈ ಕುರಿತು ನಮ್ಮ ಪ್ರತಿನಿಧಿ ನಡೆಸಿರುವ ಪ್ರತ್ಯಕ್ಷ ವರದಿ ಇಲ್ಲಿದೆ.