ಲಾಕ್ಡೌನ್ ಸಡಿಲಿಕೆ: ನಿಧಾನವಾಗಿ ತೆರೆದುಕೊಳ್ಳುತ್ತಿವೆ ಅಂಗಡಿ ಮುಂಗಟ್ಟುಗಳು - ನಿಧಾನವಾಗಿ ತೆರೆದುಕೊಳ್ಳುತ್ತಿರುವ ಅಂಗಡಿ ಮುಂಗಟ್ಟುಗಳು
🎬 Watch Now: Feature Video

ಚಿಕ್ಕಮಗಳೂರು: ಕೊರೊನಾ ವೈರಸ್ ಭೀತಿಯಿಂದ ಇಡೀ ಭಾರತವೇ ಲಾಕ್ಡೌನ್ ಆಗಿದೆ. ಚಿಕ್ಕಮಗಳೂರು ಜಿಲ್ಲೆಯೂ ಕೂಡ ಕಳೆದ 1 ತಿಂಗಳಿನಿಂದ ಸಂಪೂರ್ಣ ಲಾಕ್ಡೌನ್ ಆಗಿದ್ದು, ರಾಜ್ಯ ಸರ್ಕಾರ ಲಾಕ್ಡೌನ್ ನಿಯಮದಲ್ಲಿ ಕೊಂಚ ಸಡಿಲ ಮಾಡಿದ ಹಿನ್ನೆಲೆ ನಗರದಲ್ಲಿ ಕೆಲ ಅಂಗಡಿ ಮುಂಗಟ್ಟುಗಳು ನಿಧಾನವಾಗಿ ತೆರೆದುಕೊಳ್ಳಲು ಪ್ರಾರಂಭಿಸಿವೆ. ನಗರದ ಎಂ.ಜಿ ರಸ್ತೆ ಹಾಗೂ ಐಜಿ ರಸ್ತೆಯಲ್ಲಿ ಅಂಗಡಿ ಮುಂಗಟ್ಟುಗಳು ತೆರೆದುಕೊಂಡಿದ್ದು, ಎಂದಿನಂತೆ ತಮ್ಮ ಕಾರ್ಯ ನಿರ್ವಹಿಸುತ್ತಿವೆ. ಇನ್ನು ಪೊಲೀಸರು ಸಹ ಎಂದಿನಂತೆ ತಮ್ಮ ಕಾರ್ಯವನ್ನು ನಿರ್ವಹಿಸುತ್ತಿದ್ದು, ಅನಗತ್ಯವಾಗಿ ಸಂಚರಿಸುವವರನ್ನು ಪ್ರಶ್ನೆ ಮಾಡುತ್ತಿದ್ದಾರೆ.
TAGGED:
chikkamgaluru lock down news