ದ.ಕ ಜಿಲ್ಲೆಯಲ್ಲಿ ಇಂದಿನಿಂದ ಲಾಕ್ಡೌನ್ ತೆರವು: ಮತ್ತೆ ಜನರ ಓಡಾಟ ಆರಂಭ - ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಾಕ್ ಡೌನ್ ತೆರವು
🎬 Watch Now: Feature Video
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಇದ್ದ ಲಾಕ್ಡೌನ್ ನಿನ್ನೆಗೆ ಮುಕ್ತಾಯವಾಗಿದ್ದು, ಇಂದು ಜಿಲ್ಲೆಯಲ್ಲಿ ಜನರ ಓಡಾಟ ಆರಂಭವಾಗಿದೆ. ಕೊರೊನಾ ಪ್ರಕರಣಗಳು ಗಣನೀಯವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಒಂದು ವಾರ ಕಾಲ ಲಾಕ್ಡೌನ್ ಘೋಷಿಸಲಾಗಿತ್ತು. ಈ ಸಂದರ್ಭದಲ್ಲಿ ಆರೋಗ್ಯ, ಸರ್ಕಾರಿ, ಕೃಷಿ ಮತ್ತು ತುರ್ತು ಸೇವೆಗಳ ಓಡಾಟಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿತ್ತು. ಆದರೆ ಇಂದಿನಿಂದ ಲಾಕ್ಡೌನ್ ತೆರವುಗೊಳಿಸಲಾಗಿದ್ದು, ಮತ್ತೆ ಜನರ ಓಡಾಟ ಆರಂಭವಾಗಿದೆ. ಜಿಲ್ಲೆಯಲ್ಲಿ ನಿನ್ನೆಯವರೆಗೆ ಒಟ್ಟು 3,996 ಕೊರೊನಾ ಪ್ರಕರಣಗಳು ದೃಢಪಟ್ಟಿವೆ. ಇದರಲ್ಲಿ 92 ಮಂದಿ ಸಾವನ್ನಪ್ಪಿದ್ದಾರೆ. ಈ ಕುರಿತು ನಮ್ಮ ಪ್ರತಿನಿಧಿ ನಡೆಸಿರುವ ವಾಕ್ ಥ್ರೂ ಇಲ್ಲಿದೆ.