ಬಾಗಲಕೋಟೆಯಲ್ಲಿ ಸಾಮಾಜಿಕ ಅಂತರವಿಲ್ಲದೆ ವ್ಯಾಪಾರ-ವಹಿವಾಟು - ಬಾಗಲಕೋಟೆಯಲ್ಲಿ ಕೊರೊನಾ ಎಫೆಕ್ಟ್
🎬 Watch Now: Feature Video
ಬಾಗಲಕೋಟೆ: ಕೋವಿಡ್ -19 ಹಿನ್ನೆಲೆ ಲಾಕ್ಡೌನ್ ದೇಶದಲ್ಲಿ ಘೋಷಿಸಲಾಗಿದೆ. ಆದರೆ ಇದನ್ನು ಮೀರಿ ಜಿಲ್ಲೆಯ ಲೋಕಾಪೂರ ಪಟ್ಟಣದ ಮಾರುಕಟ್ಟೆಯಲ್ಲಿ ಜನಜಂಗುಳಿ ಕಂಡು ಬಂದಿದೆ. ಇಂದು ಅಮಾವಾಸೆ ಆಗಿರುವುದರಿಂದ ಸುತ್ತಮುತ್ತಲಿನ ಗ್ರಾಮದ ಜನತೆ ಯಾವುದೇ ಸಾಮಾಜಿಕ ಅಂತರವಿಲ್ಲದೆ ವ್ಯಾಪಾರದಲ್ಲಿ ತೊಡಗಿದ್ದರು. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಿ ಸೂಕ್ತ ಬಿಗಿ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.