ಲಾರಿ-ಆಟೋ ನಡುವೆ ಅಪಘಾತವಾಗಿ ಶಾಲಾ ಶಿಕ್ಷಕಿ ಸಾವು: ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ - ಲಾರಿ-ಆಟೋ ನಡುವೆ ಅಪಘಾತ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
🎬 Watch Now: Feature Video
ಮಂಗಳೂರು: ನಗರದ ಕದ್ರಿಕಂಬ್ಳದಲ್ಲಿ ರಿಕ್ಷಾವೊಂದಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಶಾಲಾ ಶಿಕ್ಷಕಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಅಪಘಾತದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪಣಂಬೂರಿನ ಕೇಂದ್ರೀಯ ವಿದ್ಯಾಲಯದ ಶಿಕ್ಷಕಿ ಶೈಲಜಾ ರಾವ್ (55) ಮೃತಪಟ್ಟವರು. ಇವರು ನಗರದ ಬಿಜೈ ನಿವಾಸಿಯಾಗಿದ್ದು, ಆಟೋದಲ್ಲಿ ಪ್ರಯಾಣ ಮಾಡುತ್ತಿದ್ದರು. ಘಟನೆಯಲ್ಲಿ ಆಟೋ ಚಾಲಕನಿಗೆ ಗಂಭೀರ ಗಾಯಗಳಾಗಿವೆ. ಮಂಗಳೂರು ಪಶ್ಚಿಮ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.