ಲಾರಿ-ಬೈಕ್ ನಡುವೆ ಡಿಕ್ಕಿ: ಯುವಕ ಸ್ಥಳದಲ್ಲೇ ಸಾವು, ಮತ್ತೋರ್ವನ ಸ್ಥಿತಿ ಗಂಭೀರ - Lorry-Bike
🎬 Watch Now: Feature Video
ಲಾರಿ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಯುವಕ ಸ್ಥಳದಲ್ಲೇ ಸಾವನಪ್ಪಿ, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೀದರ್ ಜಿಲ್ಲೆಯಲ್ಲಿ ನಡೆದಿದೆ. ಹುಮನಾಬಾದ್ ಪಟ್ಟಣದ ಹೊರ ವಲಯದ ಶಕುಂತಲಾ ಕಾಲೇಜು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಸಿಂಧನಕೇರಾ ಗ್ರಾಮದ ರಾಹುಲ್(21) ಎಂಬಾತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನೆಯಿಂದ ಶಿವಕುಮಾರ್ ಎಂಬಾತನಿಗೆ ಗಂಭೀರವಾಗಿ ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಹುಮನಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.