ಶಿವರಾತ್ರಿ ಹಿನ್ನೆಲೆ: ಅರಮನೆಯ ತ್ರಿನೇಶ್ವರನ ದರ್ಶನಕ್ಕೆ ಮುಗಿಬಿದ್ದ ಭಕ್ತಾದಿಗಳು - ಅರಮನೆಯ ತ್ರಿನೇಶ್ವರ ದೇವಾಲಯ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-10960008-thumbnail-3x2-bngjpg.jpg)
ಮೈಸೂರು: ಶಿವರಾತ್ರಿ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಇರುವ ದೇವಾಲಯಗಳಿಗೆ ಭಕ್ತಾದಿಗಳು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ. ಅದರಂತೆ ಅರಮನೆಯ ತ್ರಿನೇಶ್ವರ ದೇವಾಲಯದಲ್ಲಿ ಶಿವಲಿಂಗಕ್ಕೆ 11 ಕೆಜಿ ತೂಕವಿರುವ ಚಿನ್ನದ ಕೊಳಗವನ್ನು ಇಂದು ಬೆಳಗ್ಗೆ ಧಾರಣೆ ಮಾಡಿ ಪಂಚಾಮೃತ ಅಭಿಷೇಕ, ಪುಷ್ಪಾಭಿಷೇಕದ ನಂತರ ದೇವರ ದರ್ಶನಕ್ಕೆ ಅನುವು ಮಾಡಿಕೊಡಲಾಗಿದೆ. ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.