ದ.ಕ ಜಿಲ್ಲಾ ಯುವಕಾಂಗ್ರೆಸ್ ಅಧ್ಯಕ್ಷರಾಗಿ ಲುಕ್ಮಾನ್ ಬಂಟ್ವಾಳ ಆಯ್ಕೆ - ಲುಕ್ಮಾನ್ ಬಂಟ್ವಾಳ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-10508334-953-10508334-1612511998951.jpg)
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಲುಕ್ಮಾನ್ ಬಂಟ್ವಾಳ ಆಯ್ಕೆಯಾಗಿದ್ದಾರೆ. ಕಳೆದ ತಿಂಗಳು ಯುವ ಕಾಂಗ್ರೆಸ್ ಘಟಕಕ್ಕೆ ನಡೆದ ಚುನಾವಣೆಯಲ್ಲಿ ಲುಕ್ಮಾನ್ ಬಂಟ್ವಾಳ, ಅತಿ ಹೆಚ್ಚು ಮತ ಪಡೆದು ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಗಿರೀಶ್ ಆಳ್ವ, ಕಾರ್ಯದರ್ಶಿಯಾಗಿ ಮೊಹಮ್ಮದ್ ಶೋಯಿಬ್ ಆಯ್ಕೆಯಾಗಿದ್ದಾರೆ. ಈ ಟಿವಿ ಭಾರತದೊಂದಿಗೆ ಮಾತನಾಡಿದ ದ.ಕ ಜಿಲ್ಲಾ ಯುವ ಕಾಂಗ್ರೆಸ್ ನೂತನ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ, ಜಿಲ್ಲೆಯಲ್ಲಿ ಯುವ ಕಾಂಗ್ರೆಸ್ ಸಂಘಟನೆಯನ್ನು ಪ್ರತಿ ಹಳ್ಳಿಗಳಲ್ಲಿ ಕ್ಯಾಡರ್ ಬೇಸ್ ರೂಪದಲ್ಲಿ ಸಂಘಟಿಸಲಾಗುವುದು ಎಂದರು.