ಕಾರವಾರದಲ್ಲಿ ಗಮನ ಸೆಳೆದ ಮಹಾತ್ಮಾ ಗಾಂಧೀಜಿ ಛಾಯಾಚಿತ್ರ ಪ್ರದರ್ಶನ - Karwar latest news
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-4947511-thumbnail-3x2-jay.jpg)
ಕಾರವಾರ: ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರ 150ನೇ ವರ್ಷಾಚರಣೆ ಅಂಗವಾಗಿ ಕಾರವಾರದಲ್ಲಿ ಇಂದಿನಿಂದ ಮೂರು ದಿನಗಳ ಛಾಯಾಚಿತ್ರ ಪ್ರದರ್ಶನ ಆಯೋಜಿಸಲಾಗಿದೆ. ನಗರದ ಜಿಲ್ಲಾ ರಂಗಮಂದಿರದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಆಯೋಜಿಸಲಾಗಿರುವ ಕಾರ್ಯಕ್ರಮಕ್ಕೆ, ಜಿಲ್ಲಾಧಿಕಾರಿ ಡಾ. ಹರೀಶ್ ಕುಮಾರ್. ಕೆ ಚಾಲನೆ ನೀಡಿದರು. ಬಾಪೂಜಿ ಉತ್ತರಕನ್ನಡ ಜಿಲ್ಲೆಗೆ ಆಗಮಿಸಿದ ಸವಿ ನೆನಪಿನ ಛಾಯಾಚಿತ್ರ ಸೇರಿದಂತೆ 50ಕ್ಕೂ ಹೆಚ್ಚು ಛಾಯಾಚಿತ್ರಗಳನ್ನು ಪ್ರದರ್ಶಿಸಲಾಯಿತು. ವಿವಿಧ ಶಾಲಾ-ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರು ಛಾಯಾಚಿತ್ರ ವೀಕ್ಷಿಸಿದರು.
TAGGED:
Karwar latest news