ಮೆಜೆಸ್ಟಿಕ್, ರೈಲ್ವೆ ನಿಲ್ದಾಣ ಖಾಲಿ ಖಾಲಿ.. ಪ್ರಯಾಣಿಕರಿಗೆ ಆಹಾರ ಹಂಚಿದ ಪಾಲಿಕೆ ಸದಸ್ಯರು!

By

Published : Mar 23, 2020, 12:27 PM IST

thumbnail
ಬೆಂಗಳೂರು : ಕೊರೊನಾ ಭೀತಿ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಎಲ್ಲಾ ರೈಲುಗಳನ್ನು ಸ್ಥಗಿತಗೊಳಿಸಿದೆ. ಗುಂಪು ಗುಂಪಾಗಿ ಜನ ಸೇರುವುದನ್ನು ತಡೆಯಲು ಈ ಕ್ರಮವನ್ನು ಕೈಗೊಳ್ಳಲಾಗಿದೆ. ಜನರಿಲ್ಲದೆ ಮೆಜೆಸ್ಟಿಕ್‌ ಬಸ್‌ ನಿಲ್ದಾಣ ಬಿಕೋ ಎನ್ನುತ್ತಿದೆ. ಮತ್ತೊಂದೆಡೆ ಪ್ರಯಾಣಿಕರು ರೈಲ್ವೆ ನಿಲ್ದಾಣದಲ್ಲಿ ಬೀಡು ಬಿಟ್ಟಿದ್ದಾರೆ. ಹೋಟೆಲ್​​ ಸೇರಿದಂತೆ ಎಲ್ಲಾ ಶಾಪ್​ಗಳು ಬಂದ್​ ಆಗಿವೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಸದಸ್ಯರ ತಂಡವೊಂದು ನಿಲ್ದಾಣದಲ್ಲಿದ್ದ ಪ್ರಯಾಣಿಕರಿಗೆ ತಿಂಡಿ, ನೀರಿನ ಬಾಟಲ್‌ಗಳನ್ನು ನೀಡಿ ಮಾನವೀಯತೆ ಮೆರೆಯುತ್ತಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.