ಕೊರೊನಾ ಭೀತಿ: ಪ್ರಯಾಣಿಕರಿಲ್ಲದೆ ಬಿಕೋ ಎನ್ನುತ್ತಿದೆ ಮಂಡ್ಯ ಬಸ್ ನಿಲ್ದಾಣ - ಮಂಡ್ಯ ಕೆಎಸ್ಆರ್ಟಿಸಿ ಬಸ್ ನಿಲ್ದಾಣ
🎬 Watch Now: Feature Video
ಮಂಡ್ಯ: ಕೊರೊನಾ ಎರಡನೇ ಅಲೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನರು ಬಸ್ಗಳಲ್ಲಿ ಸಂಚರಿಸಲು ಹಿಂದೇಟು ಹಾಕುತ್ತಿದ್ದಾರೆ. ಹೀಗಾಗಿ ಮಂಡ್ಯ ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಪ್ರಯಾಣಿಕರಿಲ್ಲದೇ ಬಿಕೋ ಎನ್ನುತ್ತಿದೆ. ಗ್ರಾಮೀಣ ಪ್ರದೇಶಗಳಿಗೆ ಸಂಚರಿಸುತ್ತಿದ್ದ ಬಸ್ಗಳನ್ನು ಸ್ಥಗಿತಗೊಳಿಸಲಾಗಿದ್ದು, ಬೆಂಗಳೂರು, ಮೈಸೂರು ಹಾಗೂ ಕೆಲವು ತಾಲೂಕು ಕೇಂದ್ರಗಳಿಗಷ್ಟೇ ಬಸ್ ವ್ಯವಸ್ಥೆ ಮಾಡಲಾಗಿದೆ. ಇಂದು ಮಂಡ್ಯ ಡಿಪೋದಿಂದ ಕೇವಲ 23 ಬಸ್ಗಳು ಸಂಚಾರ ಮಾಡುತ್ತಿದ್ದು, ಬೆಂಗಳೂರಿಗೆ 10, ಮೈಸೂರಿಗೆ 4 ಹಾಗೂ ಇತರೆ ಮಾರ್ಗವಾಗಿ 9 ಬಸ್ ಮಾತ್ರ ಸಂಚಾರ ನಡೆಸುತ್ತಿವೆ. ಈ ಕುರಿತು ನಮ್ಮ ಪ್ರತಿನಿಧಿ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ.