ಅಗತ್ಯ ವಸ್ತುಗಳ ಖರೀದಿ ನೆಪದಲ್ಲಿ ಕೋವಿಡ್ ನಿಯಮ ಮರೆತ ಸಕ್ಕರೆ ನಾಡಿನ ಮಂದಿ - ನಿಯಮ ಉಲ್ಲಂಘನೆ
🎬 Watch Now: Feature Video
ಮಂಡ್ಯ: ಕೋವಿಡ್ ಸೋಂಕು ನಿಯಂತ್ರಿಸುವ ಸಲುವಾಗಿ ಜಿಲ್ಲೆಯಲ್ಲಿ ಐದು ದಿನಗಳ ಲಾಕ್ಡೌನ್ ಜಾರಿಗೊಳಿಸಲಾಗಿದೆ. ಸೋಮವಾರದಿಂದ ಲಾಕ್ಡೌನ್ ಜಾರಿಯಲ್ಲಿದ್ದು, ಈ ಮಧ್ಯೆ ಇಂದು ಬೆಳಗ್ಗೆ 6 ಗಂಟೆಯಿಂದ 11 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿತ್ತು. ಕೋವಿಡ್ ಸೋಂಕು ನಿಯಂತ್ರಣಕ್ಕೆ ಬಾರದಿದ್ದರೂ ಜನ ಮೈ ಮರೆತು ವಸ್ತುಗಳ ಖರೀದಿಗೆ ಮುಗಿಬಿದ್ದಿದ್ದರು. ನಗರದ ಹೊಸಹಳ್ಳಿ ವೃತ್ತದಲ್ಲಿ ಜನಸಾಗರವೇ ಕಂಡು ಬಂತು. ಸ್ಥಳದಿಂದ ನಮ್ಮ ಪ್ರತಿನಿಧಿ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ.