ಡಿಕೆಶಿ ಬಂಧನ ಖಂಡಿಸಿ ಮಂಡ್ಯದಲ್ಲಿ ಆಕ್ರೋಶ: ಪ್ರತಿಭಟನೆಗೆ ಮಾಜಿ ಸಚಿವ ಸಾಥ್ - ತಮ್ಮಣ್ಣ ಆಕ್ರೋಶ
🎬 Watch Now: Feature Video
ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಬಂಧನ ಖಂಡಿಸಿ ಮಂಡ್ಯ ಜಿಲ್ಲೆಯ ಮದ್ದೂರು, ಕಿಕ್ಕೇರಿ ಸೇರಿದಂತೆ ಜಿಲ್ಲೆಯ ಹಲವೆಡೆ ಪ್ರತಿಭಟನೆ ನಡೆದಿದೆ. ಮದ್ದೂರಿನಲ್ಲಿ ಟೈಯರ್‌ಗೆ ಬೆಂಕಿ ಹಚ್ಚಿ ಮಾಜಿ ಸಚಿವ ಡಿ. ಸಿ. ತಮ್ಮಣ್ಣ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಅಲ್ಲದೇ, ಕೆ.ಆರ್.ಪೇಟೆ ಕಿಕ್ಕೇರಿ ಗ್ರಾಮದಲ್ಲೂ ಟೈರ್‌ಗೆ ಬೆಂಕಿ ಹಚ್ಚಿ ಕಾಂಗ್ರೆಸ್ ಜೆಡಿಎಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು, ಬೆಂಗಳೂರು-ಮೈಸೂರು ಹೆದ್ದಾರಿ ತಡೆದು ಕೇಂದ್ರ ಸರ್ಕಾರ ಹಾಗೂ ಇಡಿ ವಿರುದ್ಧ ಪ್ರತಿಭಟನಾಕಾರರು ಘೋಷಣೆ ಕೂಗಿದರು.