ಮಂಗಳೂರು : 2ನೇ ಹಂತದ ಗ್ರಾಪಂ ಚುನಾವಣೆಗೆ ನಡೆಯುತ್ತಿರುವ ಮತದಾನ ಬಿರುಸು - Mangalore grampanchayath election news
🎬 Watch Now: Feature Video
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಕಡಬ, ಸುಳ್ಯ, ಪುತ್ತೂರು ತಾಲೂಕಿನಲ್ಲಿ 2ನೇ ಹಂತದೊಳಗೆ 114 ಗ್ರಾಮ ಪಂಚಾಯತ್‌ಗೆ ಇಂದು ಮತದಾನ ನಡೆಯುತ್ತಿದೆ. ಬೆಳಗ್ಗಿನಿಂದಲೇ ಬಿರುಸಿನಿಂದ ಮತದಾನ ನಡೆಯುತ್ತಿದ್ದು, 710 ಮತಗಟ್ಟೆಗಳಲ್ಲಿ 1,541 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಇವರಲ್ಲಿ 41 ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿ 1,500 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಎಲ್ಲಾ ಕಡೆಗಳಲ್ಲೂ ಶಾಂತಿಯುತ ಮತದಾನ ನಡೆಯುತ್ತಿದೆ.