ಅಯೋಧ್ಯೆ ತೀರ್ಪು, ಈದ್ ಮಿಲಾದ್ ಪ್ರಯುಕ್ತ ಕೊಪ್ಪಳದಲ್ಲಿ ಪೊಲೀಸರಿಂದ ಪಥ ಸಂಚಲನ - Police March Fast at Koppal
🎬 Watch Now: Feature Video
ಕೊಪ್ಪಳ: ಅಯೋಧ್ಯೆ ತೀರ್ಪು ಹಾಗೂ ಈದ್ ಮಿಲಾದ್ ಆಚರಣೆ ಹಿನ್ನೆಲೆ ಪೊಲೀಸರು ಪಥ ಸಂಚಲನ ನಡೆಸಿದರು. ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಿಂದ ಆರಂಭವಾದ ಪಥ ಸಂಚಲನ, ಅಶೋಕ ಸರ್ಕಲ್, ಜವಾಹರ ರಸ್ತೆ, ಗಡಿಯಾರ ಕಂಬ ಸರ್ಕಲ್, ಸಾಲರ್‌ಜಂಗ್ ರಸ್ತೆ ಮೂಲಕ ಕೇಂದ್ರೀಯ ಬಸ್ ನಿಲ್ದಾಣದವರೆಗೆ ಸಾಗಿ ಬಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಮುಕ್ತಾಯಗೊಂಡಿತು. ಸಿವಿಲ್ ಪೊಲೀಸರು, ಜಿಲ್ಲಾ ಸಶಸ್ತ್ರ ಮೀಸಲು ಪಡೆ ಹಾಗೂ ಕೆಎಸ್ ಆರ್ ಪಿ ತುಡಿಗಳು ಪಥಸಂಚಲನದಲ್ಲಿ ಪಾಲ್ಗೊಂಡಿದ್ದವು.