ಮೈಸೂರು ನಗರದಲ್ಲಿ ಪೊಲೀಸರಿಂದ ಮಾಸ್ಕ್ ಜಾಗೃತಿ ಕಾರ್ಯಾಚರಣೆ: ವಿಡಿಯೋ - ಮೈಸೂರಲ್ಲಿ ಪೊಲೀಸರಿಂದ ಮಾಸ್ಕ್ ಕಾರ್ಯಚರಣೆ

🎬 Watch Now: Feature Video

thumbnail

By

Published : Apr 2, 2021, 11:09 AM IST

ಮೈಸೂರು: ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರು ನಗರದಾದ್ಯಂತ ಮಾಸ್ಕ್ ಜಾಗೃತಿ ಕಾರ್ಯಾಚರಣೆ ನಡೆಸಿ ಸ್ಥಳದಲ್ಲೇ ದಂಡ ವಿಧಿಸುತ್ತಿದ್ದಾರೆ. ನಗರದ ಹಲವು ಭಾಗಗಳಲ್ಲಿ ಕಾರ್ಯಾಚರಣೆ ಕೈಗೊಂಡ ಪೊಲೀಸರು, ಅಂಗಡಿಗಳು, ಕಲ್ಯಾಣ ಮಂಟಪ, ಮಾಲ್​​ಗಳು, ಪ್ರಮುಖ ವಾಣಿಜ್ಯ ಮಳಿಗೆಗಳು ಸೇರಿದಂತೆ ರಸ್ತೆಯಲ್ಲಿ ಮಾಸ್ಕ್ ಧರಿಸದೇ ಇದ್ದ ವ್ಯಕ್ತಿಗಳಿಗೆ ಸ್ಥಳದಲ್ಲೇ 250 ರೂ‌. ದಂಡ ವಿಧಿಸಿ ಕಡ್ದಾಯವಾಗಿ ಮಾಸ್ಕ್​​ ಧರಿಸುವಂತೆ ಸೂಚನೆ ನೀಡಿದ್ದಾರೆ. ಇದರ ಜೊತೆಗೆ ವಾಣಿಜ್ಯ ಮಳಿಗೆಗೆ ಭೇಟಿ ನೀಡಿ ಕಡ್ಡಾಯವಾಗಿ ಮಳಿಗೆಗಳಲ್ಲಿ ಸ್ಯಾನಿಟೈಸರ್ ಹಾಗೂ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬೇಕು ಎಂದು ಅಂಗಡಿ ಮಾಲೀಕರಿಗೆ ಪೊಲೀಸರು ಜಾಗೃತಿ ಮೂಡಿಸುವ ಕೆಲಸ ಮಾಡಿದರು.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.