ರಾಯಚೂರಿನಲ್ಲಿ ಪೊಲೀಸರಿಗೆ ಮಾಸ್ಕ್ ವಿತರಣೆ - Mask distribution to police
🎬 Watch Now: Feature Video

ರಾಯಚೂರು: ಕೊರೊನಾ ವೈರಸ್ ಭೀತಿ ಹಿನ್ನೆಲೆ ಪೊಲೀಸರಿಗೆ ಮಾಸ್ಕ್ ವಿತರಿಸಲಾಯಿತು. ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಆವರಣದಲ್ಲಿನ ಡಿ.ಆರ್.ಮೈದಾನದಲ್ಲಿ ಮಾಸ್ಕ್ ವಿತರಣೆ ಮಾಡಲಾಯಿತು. ರಾಜ್ಯಕ್ಕೆ ಕೊರೊನಾ ವೈರಸ್ ಕಾಲಿಟ್ಟಿದ್ದು, ಓರ್ವ ವ್ಯಕ್ತಿ ಬಲಿ ತೆಗೆದುಕೊಂಡಿದೆ. ಹೀಗಾಗಿ ಸೋಂಕು ಹರಡದಂತೆ ಪೊಲೀಸರಿಗೆ ಮಾಸ್ಕ್ ವಿತರಣೆ ಮಾಡಲಾಗಿದೆ ಎಂದು ಎಸ್ಪಿ ಡಾ.ಸಿ.ಬಿ.ವೇದಮೂರ್ತಿ ತಿಳಿಸಿದ್ದಾರೆ.