ವಿಭಿನ್ನವಾಗಿ ಗಣರಾಜ್ಯೋತ್ಸವ ಆಚರಿಸಿದ ಮಾಸೂರಿನ ವಿದ್ಯಾರ್ಥಿಗಳು - Masuri Students who celebration news
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-5846640-thumbnail-3x2-lek.jpg)
71ನೇ ಗಣರಾಜ್ಯೋತ್ಸವ ಆಚರಣೆಯನ್ನು ಹಾವೇರಿ ಜಿಲ್ಲೆ ರಟ್ಟಿಹಳ್ಳಿ ತಾಲೂಕಿನ ಮಾಸೂರಿನ ಸ್ವಾಮಿ ವಿವೇಕಾನಂದ ಶಿಕ್ಷಣ ಸಂಸ್ಥೆ ವಿಭಿನ್ನವಾಗಿ ಆಚರಿಸುವ ಮೂಲಕ ರಾಷ್ಟ್ರಪ್ರೇಮ ಮೆರೆಯಿತು. ಶಾಲೆಯಲ್ಲಿ ಧ್ವಜಾರೋಹಣ ನಡೆಸಿದ ನಂತರ 100 ಮೀಟರ್ ಉದ್ದದ ತ್ರಿವರ್ಣ ಧ್ವಜವನ್ನು ಮೆರವಣಿಗೆ ಮಾಡಲಾಯಿತು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಧ್ವಜ ಹಿಡಿದು ವಿದ್ಯಾರ್ಥಿಗಳು ಸಂಭ್ರಮಿಸಿದರು. ಮೂರು ಕಿ.ಮೀ ವರೆಗೆ ತ್ರಿವರ್ಣ ಧ್ವಜದ ಮೆರವಣಿಗೆ ನಡೆಸಿದ ವಿದ್ಯಾರ್ಥಿಗಳು ನೋಡುಗರಲ್ಲಿ ದೇಶಾಭಿಮಾನ ಮೂಡುವಂತೆ ಮಾಡಿದರು.