ಸಾವಿರಾರು ಭಕ್ತರ ನಡುವೆ ಅದ್ಧೂರಿಯಾಗಿ ನಡೆದ ಮಾತೋಬಾರ ಶ್ರೀ ಮುರ್ಡೇಶ್ವರ ರಥೋತ್ಸವ! - ಭಟ್ಕಳ ತಾಲೂಕಿನ ಪ್ರಸಿದ್ದ ಪ್ರವಾಸಿ ತಾಣ
🎬 Watch Now: Feature Video

ಭಟ್ಕಳ ತಾಲೂಕಿನ ಪ್ರಸಿದ್ದ ಪ್ರವಾಸಿ ತಾಣವಾದ ಮುರ್ಡೇಶ್ವರದ ಮಾತೋಬಾರ ಶ್ರೀ ಮುರ್ಡೇಶ್ವರ ದೇವರ ರಥೋತ್ಸವ ಕಾರ್ಯಕ್ರಮ ಸಾವಿರಾರು ಭಕ್ತಾಧಿಗಳ ಹರ್ಷೋದ್ಗಾರಗಳ ನಡುವೆ ವಿಜೃಂಭಣೆಯಿಂದ ಮಂಗಳವಾರ ಸಂಜೆ ನಡೆಯಿತು. ಜನವರಿ 14 ರಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿ ಜ.19 ರಂದು ಮಹಾರಥೋತ್ಸವ ಜರುಗಿತು. ಸಾವಿರಾರು ಭಕ್ತಾಧಿಗಳು ರಥಕಾಣಿಕೆ ನೀಡಿ ಪೂಜೆ ಪುರಸ್ಕಾರ ನೆರವೇರಿಸಿ ರಥೋತ್ಸವದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಸಂಜೆ 5.30 ನಂತರ ರಥೋತ್ಸವಕ್ಕೆ ಚಾಲನೆ ನೀಡಲಾಯಿತು.