ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿ.. ರಸ್ತೆಯಲ್ಲಿ ಹಾಲಿನ ಹೊಳೆ - Vehicle Overturn

🎬 Watch Now: Feature Video

thumbnail

By

Published : Sep 9, 2020, 9:14 PM IST

ದೊಡ್ಡಬಳ್ಳಾಪುರ : ಹಾಲಿನ ಪ್ಯಾಕೇಟ್‌ಗಳನ್ನ ತುಂಬಿಕೊಂಡು ತೆರಳುತ್ತಿದ್ದ ವಾಹನವೊಂದು ಏಕಾಏಕಿ ಪಲ್ಟಿ ಹೊಡೆದ ಪರಿಣಾಮ ಅದರಲ್ಲಿದ್ದ ಹಾಲಿನ ಪ್ಯಾಕೇಟ್​ಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಘಟನೆ ಯಲಹಂಕ ಹಾಗೂ ಹಿಂದೂಪುರ ನಡುವಿನ ರಾಜ್ಯ ಹೆದ್ದಾರಿ ಮುತ್ತೂರು ಬಳಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ವಾಹನ ಪಲ್ಟಿಯಾಗಿದೆ. ಪರಿಣಾಮ ಅದರಲ್ಲಿದ್ದ ಹಾಲಿನ ಪ್ಯಾಕೇಟ್​ಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿವೆ. ಚಾಲಕನಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.