ಬಿಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿ ನಿರ್ದೇಶಕ ಸ್ಥಾನಕ್ಕೆ ಸಚಿವ ಆನಂದ ಸಿಂಗ್ ನಾಮಪತ್ರ - ನಾಮಪತ್ರ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-9989578-thumbnail-3x2-chaii.jpg)
ಹೊಸಪೇಟೆ: ನಗರದ ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಆಡಳಿಯ ಮಂಡಳಿಯ ನಿರ್ದೇಶಕ ಸ್ಥಾನಕ್ಕೆ ಅರಣ್ಯ ಖಾತೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆನಂದ ಸಿಂಗ್ ಅವರು ನಾಮಪತ್ರ ಸಲ್ಲಿಸಿದರು. ತಾಲೂಕು ಕೃಷಿ ಉತ್ಪನ್ನ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘಗಳ ಮತ ಕ್ಷೇತ್ರದಿಂದ ಸಚಿವ ಆನಂದ ಸಿಂಗ್ ಅವರು ಸ್ಪರ್ಧೆ ಮಾಡುತ್ತಿದ್ದಾರೆ. ಡಿ.30 ರಂದು ಅಂತಿಮ ಫಲಿತಾಂಶ ಬರಲಿದೆ. ಸಚಿವರಿಂದ ನಾಮಪತ್ರವನ್ನು ಸ್ವೀಕರಿಸಿ ಮಾತನಾಡಿದ ಚುನಾವಣಾಧಿಕಾರಿ ಹಾಗೂ ತಹಶೀಲ್ದಾರ್ ಮಹಾಂತೇಶ್ ಮಠದ ಅವರು, ಹಗರಿಬೊಮ್ಮನಹಳ್ಳಿಯಲ್ಲಿ ಸಹಕಾರ ಕ್ಷೇತ್ರದ ಒಂದು ಸ್ಥಾನ ಖಾಲಿಯಾಗಿತ್ತು. ಈ ಹಿನ್ನೆಲೆಯಲ್ಲಿ ಚುನಾವಣೆ ನಡೆಯುತ್ತಿದೆ. ಸಚಿವ ಆನಂದ ಸಿಂಗ್ ಅವರು ಆ ಕ್ಷೇತ್ರಕ್ಕೆ ನಾಮಪತ್ರವನ್ನು ಸಲ್ಲಿಸಿದ್ದಾರೆ ಎಂದು ತಿಳಿಸಿದರು.